Rain Alert
Rain Alert: 24 ಗಂಟೆಯೊಳಗೆ ಈ 24 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ, ಚಂಡಮಾರುತದ ಎಚ್ಚರಿಕೆ ನೀಡಿದ IMD!
IMD Weather Update : ನವದೆಹಲಿ: ಮುಂದಿನ 24 ಗಂಟೆಗಳಲ್ಲಿ ಭಾರತದ ಒಟ್ಟು 24 ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ ಪೈಕಿ ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಧಾರಾಕಾರ ಮಳೆಯಾಗಲಿದೆ.
ಪ್ರಸ್ತುತ ದೇಶದಲ್ಲಿ ಮುಂಗಾರು ಮಳೆ ಇಳಿಮುಖವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಬೇರೆಲ್ಲೂ ಭಾರಿ ಮಳೆಯಾಗುವ ನಿರೀಕ್ಷೆ ಇಲ್ಲ. ಆದರೆ ಮುಂದಿನ ನಾಲ್ಕೈದು ದಿನಗಳ ಕಾಲ ಈಶಾನ್ಯ ಸೇರಿದಂತೆ ದೇಶದ ಹಲವೆಡೆ ಮಳೆಗಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಹವಾಮಾನ ಇಲಾಖೆಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಸಿಕ್ಕಿಂ, ಅಸ್ಸಾಂ, ಅರುಣಾಚಲ ಪ್ರದೇಶ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೆಲವು ಸ್ಥಳಗಳಲ್ಲಿ ಮಳೆಯಾಗುವುದು ಖಚಿತ. ಇಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎನ್ನಲಾಗಿದೆ.
ಅದೇ ಸಾಲಿನಲ್ಲಿ, ಈಶಾನ್ಯದಲ್ಲಿ ಮಳೆಯ ಅಬ್ಬರವು ಆಗಸ್ಟ್ 16 ರಿಂದ 20 ರವರೆಗೆ ಮುಂದುವರಿಯುತ್ತದೆ. ಜಾರ್ಖಂಡ್, ಛತ್ತೀಸ್‌ಗಢ, ಮಧ್ಯಪ್ರದೇಶ ಸೇರಿದಂತೆ ವಿದರ್ಭದ ಪ್ರದೇಶಗಳಲ್ಲಿ ಆಗಸ್ಟ್ 17 ರಿಂದ 20 ರವರೆಗೆ ಮಳೆಯಾಗಬಹುದು.
ಕಳೆದ ಕೆಲ ದಿನಗಳಿಂದ ಮುಂಗಾರು ಮಳೆಯು ಉತ್ತರಾಖಂಡದಲ್ಲಿ ಹಾನಿಯನ್ನುಂಟು ಮಾಡುತ್ತಿದೆ. ಹಾಗಾಗಿ ಉತ್ತರಾಖಂಡ ಮತ್ತು ಹಿಮಾಚಲದ ಕೆಲವು ಪ್ರದೇಶಗಳಲ್ಲಿ ಪುನಃ ಧಾರಾಕಾರ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.
ಇಷ್ಟು ಮಾತ್ರವಲ್ಲದೇ, ಚಂಡಮಾರುತದ ಎಚ್ಚರಿಕೆಯನ್ನೂ ನೀಡಲಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಉತ್ತರ ಪ್ರದೇಶ, ಬಿಹಾರ, ಕೊಂಕಣ ಮತ್ತು ಗೋವಾ ಸೇರಿದಂತೆ ಮರಾಠವಾಡ, ಮಧ್ಯ ಮಹಾರಾಷ್ಟ್ರ ಮತ್ತು ಗುಜರಾತ್‌ನ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.
ಆಗಸ್ಟ್ ತಿಂಗಳಿನಲ್ಲಿ ಮಾನ್ಸೂನ್ ದುರ್ಬಲಗೊಂಡ ನಂತರ ರಾಜಸ್ಥಾನದಲ್ಲಿ ಹೆಚ್ಚಿನ ಮಳೆಯಾಗಿಲ್ಲ. ಮುಂದಿನ ಎರಡು ದಿನಗಳ ಕಾಲ ಪೂರ್ವ ರಾಜಸ್ಥಾನದ ಜೈಪುರ, ಭರತ್‌ಪುರ ಮತ್ತು ಜೋಧ್‌ಪುರದ ಕೆಲವು ಭಾಗಗಳಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.
ಅದೇ ರೀತಿ ದಕ್ಷಿಣ ಭಾರತದ ಕರ್ನಾಟಕ, ಕೇರಳ, ಲಕ್ಷದ್ವೀಪ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಕೆಲವು ಕರಾವಳಿ ಪ್ರದೇಶಗಳಲ್ಲಿ ಮಳೆಯಾಗಬಹುದು.
ಮುಂದಿನ ಎರಡು ದಿನಗಳ ಕಾಲ ತಮಿಳುನಾಡು ರಾಜ್ಯದಲ್ಲಿ ಮಳೆಯಾಗಬಹುದು ಎಂದು ಹೇಳಲಾಗುತ್ತಿದೆ. ಇದರೊಂದಿಗೆ ಒಂದೋ ಎರಡೋ ಕಡೆ ಮಳೆಯಾಗುವ ಸಾಧ್ಯತೆ ಇದೆ.
ಆದ್ರೆ ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಬಿಸಿಲಿನ ತಾಪ ಮಾತ್ರ ಕಡಿಮೆಯಾಗಿಲ್ಲ. ಗುಡುಗು-ಮಿಂಚು ಕಾಣಿಸಿಕೊಂಡರೂ ಉತ್ತರ ಕರ್ನಾಟಕದ ಭಾಗದಲ್ಲಿ ಮಳೆಯಾಗಿಲ್ಲ
Subscribe to:
Comments (Atom)




